ಚಿಕ್ಕಮಗಳೂರು: ನಾನು ಮಾಡಿದ ಅಭಿವೃದ್ಧಿ ಕೆಲಸದಿಂದ ಚುನಾವಣೆಯಲ್ಲಿ ಗೆಲ್ಲಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಮಹಿಳೆಯರ ಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದ್ದು,3 ತಿಂಗಳು ಕೆಟ್ಟದನ್ನ ನೋಡಲ್ಲ, ಕೆಟ್ಟದನ್ನ ಕೇಳಲ್ಲ, ಕೆಟ್ಟದನ್ನ ಮಾಡಲ್ಲ ಎಂದರು. ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ಅಂದುಕೊಂಡಿದ್ದೇನೆ. ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲವೆಂದು ಎಂದು ಸ್ಪಷ್ಟಪಡಿಸಿದರು.
ಸಿಡಿ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗಂಭೀರ ಆರೋಪ ಮಾಡುತ್ತಲೇ ಇದ್ದಾರೆ. ರಾಜಕಾರಣದಲ್ಲಿ ಮಹಿಳೆಯರಿಗೆ ಬಹಳ ಕಷ್ಟ. ಹಂತ ಹಂತದಲ್ಲಿ ನಾವು ಅಗ್ನಿ ಪರೀಕ್ಷೆ ಎದುರಿಸಬೇಕು. ಆ ಸೀತಾ ಮಾತೆ ಕೂಡ ಅಗ್ನಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಯಾವ ಲೆಕ್ಕ. ಮಹಿಳೆ ಅಂದರೆ ಸಂಘರ್ಷ, ಅದು ಮಹಿಳೆ ಜೊತೆಯೇ ಬರುತ್ತೆ. ಹುಟ್ಟಿನಿಂದ ಸಾಯುವವರೆಗೂ ಪರೀಕ್ಷೆಗಳನ್ನ ಹೊತ್ತುಕೊಂಡೇ ಇರಬೇಕು ಎದುರಿಸಬೇಕು ಪಾಸಾಗಬೇಕು ಎಂದರು.