Wednesday, March 22, 2023
spot_img
- Advertisement -spot_img

ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ತನ್ವೀರ್ ಸೇಠ್ ಪತ್ರ : ನಿರ್ಧಾರ ಬದಲಾಯಿಸಲು ಬೆಂಬಲಿಗರ ಆಗ್ರಹ

ಮೈಸೂರು: ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಪತ್ರ ಬರೆದಿದ್ದಾರೆ.

ಚುನಾವಣಾ ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜಕೀಯ ನಿವೃತ್ತಿ ಪತ್ರದ ವಿಷಯ ತಿಳಿಯುತ್ತಿದ್ದಂತೆಯೇ ಬೆಂಬಲಿಗನೊಬ್ಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿರೋ ಘಟನೆ ನಡೆದಿದೆ, ಅಷ್ಟೇ ಅಲ್ಲದೇ ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಬೆಂಬಲಿಗರು ಆಗ್ರಹಿಸಿದ್ದಾರೆ.

Related Articles

- Advertisement -

Latest Articles