ಗುಜರಾತ್: ಗುಜರಾತ್ ವಿಧಾನ ಸಭೆ ಚುನಾವಣೆ ಆರಂಭವಾಗಿದ್ದು, ಕಾಂಗ್ರೆಸ್ ಶಾಸಕ ಪರೇಶ್ ಧನಾನಿ ತಮ್ಮ ನಿವಾಸದಿಂದ ಗ್ಯಾಸ್ ಸಿಲಿಂಡರ್ ಅನ್ನು ಸೈಕಲ್ ಹಿಂದೆ ಕಟ್ಟಿಕೊಂಡು ವಿಭಿನ್ನ ರೀತಿಯಲ್ಲಿ ಮತದಾನದ ಹಕ್ಕು ಚಲಾಯಿಸಲು ಮತಗಟ್ಟೆಗೆ ಹೋಗಿರುವ ಘಟನೆ ನಡೆದಿದೆ.
ಅಮ್ರೇಲಿಯಲ್ಲಿ ಕಾಂಗ್ರೆಸ್ ಶಾಸಕ ಪರೇಶ್ ಧನಾನಿ ವಿಶಿಷ್ಟ ರೀತಿಯಲ್ಲಿ ಮತದಾನ ಮಾಡಿ ಗಮನ ಸೆಳೆದಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯದಿಂದ ಗುಜರಾತ್ನಲ್ಲಿ ಹಣದ ದುಬ್ಬರ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಅನಿಲ, ಇಂಧನ ಬೆಲೆಗಳು ಗಗಕ್ಕೇರಿದ್ದು, ಜನರಿಗೆ ಸಮಸ್ಯೆಯಾಗಿದೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತ ಎಂದಿದ್ದಾರೆ. ಜೊತೆಗೆ ಪರೇಶ್ ಧನಾನಿ ಗ್ಯಾಸ್ ಸಿಲಿಂಡರ್ ಅನ್ನು ಕಟ್ಟಿಕೊಂಡು ಸೈಕಲ್‌ನಲ್ಲಿ ಸವಾರಿ ಮಾಡಿಕೊಂಡು ಬಂದಿದ್ದು, ಅದರ ಮೇಲೆ ಇಂದಿನ ಗ್ಯಾಸ್ ಬೆಲೆಯ ಜೊತೆಗೆ 2014ರ ಗ್ಯಾಸ್ ಬೆಲೆಗೆ ಹೋಲಿಸುವ ಫಲಕ ಅಂಟಿಸಲಾಗಿತ್ತು.
ಬಿಜೆಪಿ ಸರ್ಕಾರ ಬಂದಾಗಿನಿಂದ ಜನರಿಗೆ ಜೀವನ ನಡೆಸಲು ತೊಂದರೆ ಆಗಿದೆ, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಆಡಳಿತ ನೀಡುತ್ತೇವೆ ಎಂದರು. ಗುಜರಾತ್ ವಿಧಾ ಸಭೆ ಚುನಾವಣೆಯಲ್ಲಿ 788 ಅಭ್ಯರ್ಥಿಗಳು ತಮ್ಮ ಭವಿಷ್ಯ ನಿರ್ಧರಿಸಲು ರೆಡಿಯಾಗಿದ್ದಾರೆ.