Monday, December 4, 2023
spot_img
- Advertisement -spot_img

‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿ ಸೇರಲು ನಿರಾಕರಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

ನವದೆಹಲಿ : ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ 8 ಸದಸ್ಯರ ಸಮಿತಿಯ ಭಾಗವಾಗಲು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಶನಿವಾರ ನಿರಾಕರಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ, ಸಮಿತಿಯಲ್ಲಿ ಸೇವೆ ಸಲ್ಲಿಸುವುದನ್ನು ನಿರಾಕರಿಸಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಸಮಿತಿಯ ತೀರ್ಮಾನಗಳು ಮೋಸದಿಂದ ಕೂಡಿವೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚೌಧರಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವುದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರಜಾಪ್ರಭುತ್ವದ ಗಟ್ಟಿತನಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಗತ್ಯ : ಯೋಗಿ

ಕಾಂಗ್ರೆಸ್ ಪಕ್ಷ ಕೂಡ ಸಮಿತಿಯಿಂದ ಖರ್ಗೆ ಅವರನ್ನು ಹೊರಗಿಟ್ಟಿರುವುದನ್ನು ತೀವ್ರವಾಗಿ ಖಂಡಿಸಿದೆ, ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್, ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿರುವುದು ಭಾರತದ ಸಂಸದೀಯ ಪ್ರಜಾಪ್ರಭುತ್ವವನ್ನು ಹಾಳುಮಾಡುವ ವ್ಯವಸ್ಥಿತ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಆಘಾತಕಾರಿ ವಿಷಯವೆಂದರೆ, ರಾಜ್ಯಸಭೆಯ ಹಾಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬದಲಿಗೆ, ಮಾಜಿ ವಿರೋಧ ಪಕ್ಷದ ನಾಯಕರನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಎನ್‌ಕೆ ಸಿಂಗ್, ಸುಭಾಷ್ ಕಶ್ಯಪ್, ಹರೀಶ್ ಸಾಳ್ವೆ ಮತ್ತು ಸಂಜಯ್ ಕೊಠಾರಿ ಅವರನ್ನು ಒಳಗೊಂಡಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles