Wednesday, March 22, 2023
spot_img
- Advertisement -spot_img

ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಭೇಟಿ : ಅಭಿಮಾನಿಗಳು , ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ


ಬೆಂಗಳೂರು : ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಸಲಾಗುತ್ತಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ.

ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದು, ರಣದೀಪ್ ಸಿಂಗ್ ಸುರ್ಜೆವಾಲಾ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಹಾಜರಿರಲಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಬಳಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಲಿದ್ದು, ಮಧ್ಯಾಹ್ನ 2 :30 ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆ. ಪಕ್ಷದ ರಾಜ್ಯ ಘಟಕದ ವತಿಯಿಂದ ಅರಮನೆ ಮೈದಾನದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

Related Articles

- Advertisement -

Latest Articles