Wednesday, May 31, 2023
spot_img
- Advertisement -spot_img

ಕಾಂಗ್ರೆಸ್‌ನಿಂದ ರಾಜ ಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸರ ವಶಕ್ಕೆ

ಬೆಂಗಳೂರು: ರಾಜಭವನ ಚಲೋದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ , ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ನಾವು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡ ನಂತರ ಪರಿಶಿಷ್ಠರ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ತರಾತುರಿಯಲ್ಲಿ ಕಣ್ಣೊರೆಸುವ ತಂತ್ರಕ್ಕೆ ಮೊರೆ ಹೋಗಿದೆ ಎಂದರು. ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಕಾಂಗ್ರೆಸ್‌ ನಾಯಕರು ತೆರಳಲು ಮುಂದಾದಾಗ ಅರ್ಧದಲ್ಲೇ ಪೊಲೀಸರು ಕೈ ನಾಯಕರನ್ನು ತಡೆದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸದ್ಯ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ.

Related Articles

- Advertisement -

Latest Articles