ಚಾಮರಾಜನಗರ: ಕಾಂಗ್ರೆಸ್ ಗೆ ಮೋಸ ಮಾಡಿದರೆ, ತಂದೆ ತಾಯಿಗೆ ಮೋಸ ಮಾಡಿದಂತೆ ಎಂದು ನಟ, ಕಾಂಗ್ರೆಸ್ ಮುಖಂಡ ಸಾಧುಕೋಕಿಲ ಹೇಳಿದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿ, ಕಾಂಗ್ರೆಸ್ ಗೆ ಸಿದ್ದರಾಮಯ್ಯ ಹುಲಿ ಇದ್ದಂತೆ, ಡಿ.ಕೆ. ಶಿವಕುಮಾರ್ ಸಿಂಹ ಇದ್ದಂತೆ, ಇವರಿಬ್ಬರು ಇದ್ದ ಮೇಲೆ ಬೇರೆಯವರು ಯಾಕೆ? ಕಾಂಗ್ರೆಸ್ ಗೆ ನಿಮ್ಮ ಇರಲಿ ಎಂದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್,ಕಾಂಗ್ರೆಸ್ ಗೂ ಮತ್ತು ಜನರಿಗೂ ಇರುವ ಸಂಬಂಧ ಕೇವಲ ರಾಜಕೀಯದ್ದಲ್ಲ, ಹೃದಯದ ಸಂಬಂಧ ಎಂದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ, ಭ್ರಷ್ಟ, ದರಿದ್ರ ಬಿಜೆಪಿ ಸರ್ಕಾರ ಹೋಗಲಾಡಿಸಲು ಪ್ರತಿಯೊಬ್ಬ ಮತದಾರನೂ ಕೂಡ ಪ್ರತಿಜ್ಞೆ ಮಾಡಬೇಕು ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ, ಭ್ರಷ್ಟ, ದರಿದ್ರ ಬಿಜೆಪಿ ಸರ್ಕಾರ ಹೋಗಲಾಡಿಸಲು ಪ್ರತಿಯೊಬ್ಬ ಮತದಾರನೂ ಕೂಡ ಪ್ರತಿಜ್ಞೆ ಮಾಡಬೇಕು, ಎಚ್.ಎಂ. ಗಣೇಶ್ ಪ್ರಸಾದ್ ರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಎಚ್.ಎಂ. ಗಣೇಶ್ ಪ್ರಸಾದ್ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವೇದಿಕೆಯಲ್ಲಿ ಈ ವೇಳೆ ಘೋಷಿಸಿದರು.