ದೆಹಲಿ : ಸಂಸತ್ತಿನಲ್ಲಿ ಅದಾನಿ, ರಾಹುಲ್ ಗಾಂಧಿ ಹೇಳಿಕೆಗೆ ವಿರೋಧಿಸಿ ಗದ್ದಲ ಉಂಟಾಗಿದ್ದು, ಉಭಯ ಸದನಗಳನ್ನು ಮಾರ್ಚ್ 20ಕ್ಕೆ ಮುಂದೂಡಲಾಗಿದೆ.
ಕಾಂಗ್ರೆಸ್ ನಾಯಕರು ಅದಾನಿ ಗ್ರೂಪ್ ಅವ್ಯವಹಾರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಸಂಸತ್ತಿನ ಎರಡನೇ ಹಂತದ ಬಜೆಟ್ ಅಧಿವೇಶನದ ಮುಂದೂಡಲಾಗಿದೆ.
ಮಾರ್ಚ್ 13 ರಂದು ಅಧಿವೇಶನ ಆರಂಭವಾಗಿ ಪದೇ ಪದೇ ಮುಂದೂಡಲ್ಪಡುತ್ತಿದೆ, ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಆಕ್ರೋಶಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಂಸದೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭಾಗವಹಿಸಿದ್ದರು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಭೆ ಸುಗಮವಾಗಿ ನಡೆಸಲು ಮನವಿ ಮಾಡಿದ್ರೂ, ಸದಸ್ಯರು ಸದನದಲ್ಲಿ ಗೊಂದಲದ ವಾತಾವರಣ ನಿರ್ಮಿಸಿದರು.