ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಒಂದು ದಿನದ ಸತ್ಯಾಗ್ರಹ ಹಮ್ಮಿಕೊಂಡಿದೆ.
ಇಂದು ಬೆಳಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಕೊನೆಯಾಗಲಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಷ್ಟ್ರ ರಾಜಧಾನಿಯ ರಾಜ್ ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಗಾಂಧಿ ಪ್ರತಿಮೆಗಳ ಮುಂದೆ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಮುಂದಾಗಿದೆ.
ರಾಹುಲ್ ಗಾಂಧಿ ಒಬ್ಬಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ಸಿಗರು ಮತ್ತು ಜನರು ಅವರೊಂದಿಗೆ ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಹೀಗಾಗಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸತ್ಯಾಗ್ರಹ ಆಯೋಜಿಸಲು ತಿಳಿಸಲಾಗಿದೆ” ಎಂದು ಕಾಂಗ್ರೆಸ್ ಹೇಳಿದೆ. ಸಂಕಲ್ಪ ಸತ್ಯಾಗ್ರಹದಲ್ಲಿಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.
ನನ್ನ ಹೆಸರು ರಾಹುಲ್ ಗಾಂಧಿ, ವೀರ್ ಸಾವರ್ಕರ್‌ರಂತೆ ನಾನು ಕ್ಷಮೆ ಕೇಳುವುದಿಲ್ಲ” ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ”ಸತ್ಯಕ್ಕಾಗಿ ಹೋರಾಡುವುದು ಹಾಗೂ ದೇಶದ ಪ್ರಜಾಪ್ರಭುತ್ವದ ಸ್ವರೂಪ ರಕ್ಷಿಸುವುದು ನನಗೆ ಇರುವ ಒಂದೇ ಒಂದು ಹೆಜ್ಜೆ. ನಾನು ಯಾವುದೇ ಅಡೆತಡೆಗಳನ್ನು ಲೆಕ್ಕಿಸದೇ ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದ್ದರು.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.