ಹುಬ್ಬಳ್ಳಿ: ಬೊಮ್ಮಾಯಿ ‘ಪ್ರಧಾನಿ ಮೋದಿಯವರ ಮುಂದೆ ಇಲಿಯಾಗಿರುವ ರಾಜ್ಯದ ಅತ್ಯಂತ ದುರ್ಬಲ ಸಿಎಂ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಜಲಜನ ಸಮಾವೇಶದಲ್ಲಿ ಮಾತನಾಡಿ, ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದೇ ಆದರೆ, ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆ, ಪ್ರಸ್ತುತ ಬಿಜೆಪಿ ಸರ್ಕಾರದ ಸುಳ್ಳುಗಳಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದರು.
ನಾವು ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆ. ಈ ಯೋಜನೆಗೆ 1,000 ಕೋಟಿ ರೂ.ಗಳನ್ನು ಮೀಸಲಿಡುತ್ತೇವೆ ಬಿಜೆಪಿಯು ಚುನಾವಣೆಯ ಮೊದಲು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ.
ಕಳಸಾ ಬಂಡೂರಿ ಯೋಜನೆ ಯಾಕೆ ಆರಂಭಿಸಲಿಲ್ಲ. ನಿಮ್ಮ ಪ್ರಣಾಳಿಕೆಯಲ್ಲಿ 600 ಭರವಸೆ ಕೊಟ್ಟಿದ್ದು ಅದಲ್ಲಿ ಶೇ.10ರಷ್ಟು ಜಾರಿ ಮಾಡಲು ಆಗಿಲ್ಲ, ಈ ಸರ್ಕಾರವನ್ನು ಬೀಳಿಸಲು ರಾಜ್ಯದ ಜನತೆ ಕಾಯುತ್ತಿದ್ದಾರೆ ಎಂದು ಹೇಳಿದರು.