ಬೆಂಗಳೂರು: ಪ್ರವಾಹ ಬಂದು ಸಂಕಷ್ಟ ಎದುರಿಸುತ್ತಿದ್ದಾಗ ಕರ್ನಾಟಕಕ್ಕೆ ಬಾರದ ನರೇಂದ್ರ ಮೋದಿ ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿಯವರ ಈ ದ್ರೋಹಕ್ಕೆ ಧನ್ಯವಾದಗಳು! ಥ್ಯಾಂಕ್ಯೂ ಮೋದಿ ಎಂಬ ಹ್ಯಾಷ್ಟ್ಯಾಗ್ ಅಡಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
ಗ್ಯಾಸ್ ಬೆಲೆಯನ್ನು ₹1000 ದಾಟಿಸಿ, ಪೆಟ್ರೋಲ್ ಬೆಲೆಯನ್ನು ₹100 ದಾಟಿಸಿ, ಜನರ ಬದುಕಿನ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಮೋದಿಗೆ ಧನ್ಯವಾದಗಳು! ಎಂದು ಉಲ್ಲೇಖಿಸಿದೆ. ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲೇ ಅವರನ್ನು ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ.
40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ ಮೋದಿ ಅವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.