ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳು ಹಾಗೂ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ದರ್ಶನ್ ಗೆ ಟಿಕೆಟ್ ನೀಡಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರಕ್ಕೆ ಕೃಷ್ಣಪ್ಪ ಜಿ, ಬಂಟ್ವಾಳ ರಮಾನಾಥ ರೈ, ಮೂಡಬಿದರೆ ಕ್ಷೇತ್ರಕ್ಕೆ ಮಿಥುನ್ ರೈ, ಬೆಳ್ತಂಗಡಿ ಕ್ಷೇತ್ರಕ್ಕೆ ರಕ್ಷಿತ್ ಶಿವರಾಂ ಅವಕಾಶ ಪಡೆದಿದ್ದು, ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರಕ್ಕೆ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆಯವರನ್ನು ಪಕ್ಷ ಆಯ್ಕೆ ಮಾಡಿದೆ. ಇನ್ನುಳಿದಂತೆ ಮಂಗಳೂರು ನಗರ, ಪುತ್ತೂರು, ಸುರತ್ಕಲ್ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಇನ್ನಷ್ಟೇ ಅಭ್ಯರ್ಥಿಯ ಆಯ್ಕೆ ನಡೆಯಬೇಕಾಗಿದೆ.