Sunday, September 24, 2023
spot_img
- Advertisement -spot_img

ತೆಲಂಗಾಣದಲ್ಲೂ ಕಾಂಗ್ರೆಸ್‌ನಿಂದ 5 ಗ್ಯಾರಂಟಿ ಘೋಷಣೆ!

ಹೈದರಾಬಾದ್: ರಾಜ್ಯದಲ್ಲಿ ಕಾಂಗ್ರೆಸ್ 5 ಗ್ಯಾರಂಟಿಗಳ ಮುಂದಿಟ್ಟು ಅಧಿಕಾರದ ಚುಕ್ಕಾಣಿ ಹಿಡಿದಿರುವ ನಡುವೆ ಇತರೆ ರಾಜ್ಯಗಳಲ್ಲೂ ಈ ಗ್ಯಾರಂಟಿ ಯೋಜನೆಗಳು ಸದ್ದು ಮಾಡಿವೆ. ಇದೀಗ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ತೆಲಂಗಾಣ ಕಾಂಗ್ರೆಸ್ ಸಹ 5 ಗ್ಯಾರಂಟಿ ಘೋಷಣೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 17 ರಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ‘ಐದು ಭರವಸೆ’ಗಳನ್ನು ಘೋಷಿಸಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಜರಿರಲಿದ್ದು, ಈ ವೇಳೆ ಐದು ಚುನಾವಣಾ ಗ್ಯಾರಂಟಿಗಳ ಬಿಡುಗಡೆ ಮಾಡಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ.ರೇವಂತ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ‘2024ರ ಬಳಿಕ ಸರ್ಕಾರ, ಪ್ರಧಾನಿಯನ್ನು ಬದಲಾಯಿಸ್ತೇವೆ’

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಹೊಸದಾಗಿ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 16 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಇನ್ನು ಒಂದೆರಡು ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ಮತದಾರರಿಗೆ ನೀಡಿದ ಭರವಸೆಗಳನ್ನು ಒಳಗೊಂಡ ‘ರೈತ ಘೋಷಣೆ’, ‘ಎಸ್‌ಸಿ, ಎಸ್‌ಟಿ ಘೋಷಣೆ’ ಮತ್ತು ‘ಯುವ ಘೋಷಣೆ’ಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: ‘ಭಾರತ್’ ಹೆಸರು ಇಷ್ಟವಾಗದಿದ್ದರೆ ದೇಶ ಬಿಟ್ಟು ತೆರಳಬಹುದು’

ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಒಟ್ಟು 119 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles