Tuesday, March 28, 2023
spot_img
- Advertisement -spot_img

ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮನೆಗೆ ಮುತ್ತಿಗೆ ಹಾಕ್ತೇವೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್

ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರು‌ ಇಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದು, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹೀಗಾಗಿ 8 ಕೋಟಿ ನಗದು ಸಿಕ್ಕಿದೆ, ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲಾಗಿದೆ.

ಹೀಗಾಗಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ರೇಸ್ ಕೋರ್ಸ್ ರಸ್ತೆಯಲ್ಲಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.ಕರ್ನಾಟಕ ಕರೆಪ್ಷನ್ ಕ್ಯಾಪಿಟಲ್ ಎಂಬ ಹೆಸರನ್ನು ಬಿಜೆಪಿ ಸರ್ಕಾರ ಕೊಟ್ಟಿದೆ, ಮುಖ್ಯಮಂತ್ರಿಗಳು ರಾಜೀನಾಮೆ ನೀಡಲೇಬೇಕಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನೂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, 40 ಕಮೀಷನ್ ಧಂದೆಯಿಂದ ರಾಜ್ಯ ತಲೆತಗ್ಗಿಸುವಂತಾಗಿದೆ ಎಂದು , ಹೀಗಾಗಿ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲೇಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶೀ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

Related Articles

- Advertisement -

Latest Articles