ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಂದಹಾಗೆ ಸಿದ್ದರಾಮಯ್ಯ ಕ್ಷೇತ್ರ ಗೊಂದಲಕ್ಕೆ ಬ್ರೇಕ್ ಬಿದ್ದಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ವರುಣ ಕ್ಷೇತ್ರ ಕೊಡಲಾಗಿದೆ. ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ, ಕೊರಟಗೆರೆಯಿಂದ ಡಾ ಜಿ ಪರಮೇಶ್ವರ್ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಕೋಲಾರದಲ್ಲಿ ಸ್ಥಳೀಯ ನಾಯಕಿ ಎಂ ರೂಪಕಲಾ ಅವರು ಅಭ್ಯರ್ಥಿಯಾಗಿದ್ದಾರೆ.
ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರು ಮೊದಲ ಪಟ್ಟಿಯಲ್ಲಿ ಬಹಿರಂಗವಾಗಿಲ್ಲ. ಚನ್ನಪಟ್ಟಣ ಕೂಡ ಹೋಲ್ಡ್ನಲ್ಲಿದ್ದು, ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಕುತೂಹಲ ಮೂಡಿಸಿದೆ.
ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ನ ಪಟ್ಟಿ ಬಿಡುಗಡೆಗೆ ಕೊಂಚ ಅಡೆ ತಡೆ ಇತ್ತು. ಇದೀಗ 124 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ.
ಅಂದಹಾಗೆ, ಕೋಲಾರದಲ್ಲಿ ಸಿದ್ದರಾಮಯ್ಯಇಲ್ಲಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದರು.
ಇದರಿಂದ ಕೋಲಾರ ಅಷ್ಟು ಸುರಕ್ಷಿತವಲ್ಲ ಎಂಬುದನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಅವರೇ ಪರ್ಯಾಯ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಂತೆ ಸೂಚ್ಯವಾಗಿ ಹೇಳಿದ್ದರು. ಇದರಿಂದ ಕೋಲಾರದ ಬದಲಾಗಿ ವರುಣಾದಿಂದ ಸ್ಪರ್ಧೆಗೆ ಇಳಿದಿದ್ದಾರೆ.