ಗುವಾಹಟಿ: ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.
ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಇತರ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಸಂಗ್ಮಾ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ.
ಚುನಾವಣೆಯಲ್ಲಿ ರಾಜ್ಯದ 60 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಪಡೆಯುವ ಮೂಲಕ ಎನ್‌ಪಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಂಗ್ಮಾ ಅವರೊಂದಿಗೆ 45 ಶಾಸಕರಿದ್ದಾರೆ ಮತ್ತು ಅವರು ಬಿಜೆಪಿ ಮತ್ತು ಕೆಲವು ಪ್ರಾದೇಶಿಕ ಪಕ್ಷಗಳನ್ನು ಘಟಕಗಳಾಗಿ ಹೊಂದಿರುವ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ.
ಬಿಜೆಪಿಯು ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ ಮಿತ್ರ ಪಕ್ಷವಾಗಿದ್ದು, ಸೀಟು ಹಂಚಿಕೆ ಒಪ್ಪಂದವನ್ನು ಚುನಾವಣೆಗೆ ಮುನ್ನ ಮಾಡಿಕೊಂಡಿದ್ದರು. NDPP 25 ಸ್ಥಾನಗಳನ್ನು ಮತ್ತು ಬಿಜೆಪಿ 12 ಸ್ಥಾನಗಳನ್ನು ಗೆದ್ದಿದೆ.