ಬೆಂಗಳೂರು: ವಿದೇಶದಲ್ಲಿ ಕೊರೊನಾ ಕೇಸ್ ಹೆಚ್ಚಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಲರ್ಟ್ ಆಗಿದ್ದು, ಇದೀಗ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಕೊರೋನಾ ಆತಂಕ ಎದುರಾಗಿದೆ.
ಬೆಂಗಳೂರಿನಲ್ಲಿ ಟಫ್ ರೂಲ್ಸ್ ಜಾರಿಯಾಗುತ್ತಾ ಎಂಬ ಪರಿಸ್ಥಿತಿ ಎದುರಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿನ ಮಧ್ಯರಾತ್ರಿಯ ಸೆಲೆಬ್ರೇಷನ್‌ಗೆ ರಿಸ್ಟಿಕ್ಷನ್ ಹಾಕಲು ಚಿಂತನೆ ನಡೆಸಲಾಗಿದ್ದು,ಹೊಟೇಲ್, ಮಾಲ್‌ಗಳಿಗೂ ಟೈಮ್ ಲಿಮಿಟ್ ನೀಡಲು ಚಿಂತನೆ ಮಾಡಲಾಗಿದೆ.
ಈಗಾಗಲೇ ನ್ಯೂ ಇಯರ್ ಸೆಲೆಬ್ರೇಷನ್ ತಯಾರಿಯಲ್ಲಿರುವ ವ್ಯಾಪಾರಿಗಳಿಗೆ ಶಾಕ್ ಆಗಿದೆ. ಹೊಸ ವರ್ಷಕ್ಕೆ ಅನುಮತಿ ನೀಡಿದರೆ ಸೋಂಕು ಹೆಚ್ಚಳವಾಗುವ ಭೀತಿಯಿದ್ದು, ಸೆಲೆಬ್ರೇಷನ್ ಬೇಡ ಎಂದು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯವರು ಹೇಳಿದ್ದಾರೆ. ಇನ್ನೂ ಈ ಸಂಬಂಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಗುರುವಾರ ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಪಾನ್, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದರು.
ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು, ಯಾವ ರೀತಿಯ ಟೆಸ್ಟ್‌ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಗುರುವಾರ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.