ಬೆಂಗಳೂರು: ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸೋ ಹಿನ್ನೆಲೆ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಸಭೆ ನಡೆಯಲಿದ್ದು, ಕಠಿಣ ಕ್ರಮ ವಹಿಸಲು ತೀರ್ಮಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಕೊರೋನಾ ರೂಪಾಂತರದ ಓಮಿಕ್ರೋನ್ ಬಿಎಫ್.7 ಒಬ್ಬರಿಂದ 17 ರಿಂದ 18 ಜನರಿಗೆ ಹರಡುವ ಸಾಧ್ಯತೆಗಳಿವೆ. ಈ ಬಾರಿ ಭರ್ಜರಿಯಾಗಿ ಹೊಸ ವರ್ಷ ಸ್ವಾಗತಕ್ಕೆ ಜನರು ಸಜ್ಜಾಗಿದ್ದಾರೆ.
ಒಂದು ವೇಳೆ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿಯೂ ಹೆಚ್ಚಳವಾಗಬಹುದು ಎಂಬ ಆತಂಕ ರಾಜ್ಯ ಸರ್ಕಾರದಲ್ಲಿದೆ.ಹೊಸ ವರ್ಷ ಸಮೀಪಿಸುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ಜೋರಿರುವುದರಿಂದ ಕೊರೊನಾ ನಿಯಮ ಪಾಲನೆ ಹಿನ್ನೆಲೆ ಮಹತ್ವದ ನಿರ್ಧಾರ ವನ್ನು ಕೈಗೊಳ್ಳಬಹುದು.
ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಲ್ಲದೆ, ಬೆಂಗಳೂರಿನ ಬ್ರಿಗೇಡ್ ರಸ್ತೆ ಸೇರಿದಂತೆ ಹೋಟೆಲ್, ರೆಸ್ಟೋರೆಂಟ್ ಸೇರಿ ಹಲವೆಡೆ ಹೊಸ ವರ್ಷದ ಸಂಭ್ರಮಾಚರಣೆಗಳು ಜೋರಿರುತ್ತದೆ. ಮೆಟ್ರೋ, ಸಾರಿಗೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ, ಲಸಿಕೆ ಪ್ರಮಾಣ ಪತ್ರ ಕಡ್ಡಾಯ, ನಿರ್ದಿಷ್ಟಜನ ಮಿತಿ, ಸಮಯದ ಮಿತಿ ಒಳಗೊಂಡ ನಿಯಮ ಜಾರಿಗೊಳಿಸಬಹುದು.