Sunday, September 24, 2023
spot_img
- Advertisement -spot_img

6 ರಾಜ್ಯಗಳ ವಿಧಾನಸಭಾ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟ

ನವದೆಹಲಿ : ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬಿಜೆಪಿ ಮಣಿಸಲು ಪಣ ತೊಟ್ಟಿರುವ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ಗೆ ಇಂದಿನ ಫಲಿತಾಂಶ ಮಹತ್ವದ್ದಾಗಿದೆ.

ಉತ್ತರಾಖಂಡದ ಬಾಗೇಶ್ವರ್, ಉತ್ತರ ಪ್ರದೇಶದ ಘೋಸಿ, ಕೇರಳದ ಪುತ್ತುಪಲ್ಲಿ, ಪಶ್ಚಿಮ ಬಂಗಾಳದ ಧುಪ್ಗುರಿ, ಜಾರ್ಖಂಡ್‌ನ ಡುಮ್ರಿ ಮತ್ತು ತ್ರಿಪುರಾದ ಬೊಕ್ಸಾನಗರ ಹಾಗೂ ಧನ್‌ಪುರ ಕ್ಷೇತ್ರಗಳಿಗೆ ಸೆಪ್ಟೆಂಬರ್ 5 ರಂದು ಮತದಾನ ನಡೆದಿತ್ತು. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.

ಇದನ್ನೂ ಓದಿ : ವಿವಿಪ್ಯಾಟ್, ಇವಿಎಂ ತಾಳೆ : ತುರ್ತು ವಿಚಾರಣೆ ಅಗತ್ಯವಿಲ್ಲ ಎಂದ ಸುಪ್ರೀಂ

ಉಪ ಚುನಾವಣೆ ನಡೆದ ಒಟ್ಟು ಏಳು ವಿಧಾನಸಭಾ ಸ್ಥಾನಗಳಲ್ಲಿ ಈ ಹಿಂದೆ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರು. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ, ಸಿಪಿಐ(ಎಂ), ಜೆಎಂಎಂ ಮತ್ತು ಕಾಂಗ್ರೆಸ್ ತಲಾ ಒಂದು ಶಾಸಕರನ್ನು ಹೊಂದಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles