ಬೆಂಗಳೂರು: ಸರ್ಕಾರದ ಯೋಜನೆ ಕುರಿತು ಅಪಪ್ರಚಾರ ಮಾಡಿರುವ ಆರೋಪದಡಿ ಹಿಂದಿ ಸುದ್ದಿ ವಾಹಿನಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಬಂಧಿಸದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಎಫ್‌ಐಆರ್‌ನಲ್ಲಿ ದಾಖಲಾದ ಪ್ರಕರಣದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ. ಅವರ ವಿರುದ್ಧ ಪ್ರಾಥಮಿಕ ಪ್ರಕರಣವಿದ್ದು, ತನಿಖೆ ನಡೆಸಬೇಕು. ಎಫ್‌ಐಆರ್ ಅನ್ನು ಪ್ರಶ್ನಿಸಿ ಚೌಧರಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಲೇವಾರಿ ಮಾಡುವುದಾಗಿ ಕೋರ್ಟ್ ತಿಳಿಸಿದ್ದು, ಅಲ್ಲಿಯವರೆಗೆ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ: ಪ್ರತಿ ತಿಂಗಳು ಮಹಿಳೆಯರಿಗೆ ₹1 ಸಾವಿರ; ಸಿಎಂ ಸ್ಟಾಲಿನ್ ಅಧಿಕೃತ ಚಾಲನೆ
ಇಂದು ವಿಚಾರಣೆ ನಡೆಸಿದ್ದ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ. ಸರ್ಕಾರದ ಯೋಜನೆಯಾಗಿದ್ದ ಸಬ್ಸಿಡಿ ದರದಲ್ಲಿ ವಾಣಿಜ್ಯ ವಾಹನ ಖರೀದಿಗೆ 3 ಲಕ್ಷ ರೂ ವರೆಗೂ ಸಹಾಯಧನ ಸಂಬಂಧ ಅವರು ಅಪಪ್ರಚಾರ ಮಾಡಿದ್ದರು ಎಂದು ದೂರಲಾಗಿದೆ. ಅಲ್ಪಸಂಖ್ಯಾತರಿಗೆ ಮಾತ್ರ ಈ ಯೋಜನೆ ಜಾರಿ ಮಾಡಲಾಗಿದ್ದು, ಹಿಂದೂಗಳಿಗೆ ಏಕೆ ಇಲ್ಲ ಎಂದು ಪ್ರಶ್ನಿಸಿದ್ದರು. ಆದರೆ ಈ ಯೋಜನೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಲ್ಲಾ ಬಡ ಸಮುದಾಯಕ್ಕೂ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿತ್ತು.
ಇದನ್ನೂ ಓದಿ: ಇಡೀ ದೇಶದ ಪತ್ರಕರ್ತರಿಗೆ ಮೋದಿ ನಿಷೇಧ ಹೇರಿದ್ದಾರಲ್ಲ?: ಸಿದ್ದರಾಮಯ್ಯ
ಈ ರೀತಿ ಸುದ್ದಿ ಪ್ರಸಾರದ ಬಳಿಕ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಎಸ್ ದೂರು ನೀಡಿದ್ದರು. ನಂತರ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆದರೆ ಈ ಎಫ್‌ಐಆರ್ ಪ್ರಶ್ನಿಸಿ ಚೌಧರಿ ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.