ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು ₹2 ಸಾವಿರ ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಹೈಕೋರ್ಟ್ ವಕೀಲ ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು. ಆದರೆ, ಪ್ರತಿವಾದಿ ರೇವಣ್ಣ ಸಮನ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಮತ್ತೊಂದು ಬಾರಿ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.