Thursday, June 8, 2023
spot_img
- Advertisement -spot_img

ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಅಭದ್ರತೆ ಕಾಡುತ್ತಿದೆ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಅಭದ್ರತೆ ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಸ್ವಾಭಿಮಾನಿ ಸಂಕಲ್ಪ ನಡಿಗೆ ಕಾರ್ಯಕ್ರಮದ ವೇಳೆ ಪ್ರತಿಕ್ರಿಯಿಸಿದರು. ಒಕ್ಕಲಿಗರನ್ನು ಓಲೈಸಲು ಬೇರೆ ಬೇರೆ ಸಮುದಾಯ ಕುಮಾರಸ್ವಾಮಿ ಒಡೆಯುತ್ತಿದ್ದಾರೆ. ಇದು ಬಹಳ ದಿನಗಳ ಕಾಲ ನಡೆಯಲ್ಲ ಎಂದರು.ಈ ರೀತಿಯ ದ್ವೇಷದ ರಾಜಕಾರಣದಿಂದ ಏನೂ ಪ್ರಯೋಜನ ಆಗಲ್ಲ ಎಂದು ತಿರುಗೇಟು ನೀಡಿದರು‌.ಹಾಗಾಗಿ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ಪ್ರಹ್ಲಾದ್ ಜೋಶಿಯವರನ್ನ ಸಿಎಂ ಮಾಡ್ತಾರೆ ಎಂಬ ವಿಚಾರ‌ದ ಬಗ್ಗೆ ಮಾತನಾಡಿ, ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗ್ತಾರೆ. ನಮ್ಮದು ರಾಷ್ಟ್ರೀಯ ಪಕ್ಷ. ನಮಗೆ ಬಹುಮತ ಬಂದಾಗ ಯಾರು ಸಿಎಂ ಅಂತ ವರಿಷ್ಠರು ತೀರ್ಮಾನ ಮಾಡುತ್ತಾರೆ. ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು. ಅವರು ಈಗಾಗಲೇ ಕೇಂದ್ರ ಸಚಿವರಾಗಿದ್ದಾರೆ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಅವ್ರು ಸಿಎಂ ಆದ್ರೂ ತಪ್ಪೇನು ಎಂದು ಪ್ರಶ್ನಿಸಿದರು.

Related Articles

- Advertisement -spot_img

Latest Articles