ದೆಹಲಿ: ಕಾಂಗ್ರೆಸ್‌ನ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕೆ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ, ಪ್ರಧಾನಿ ಮೋದಿಯವರ ಜನಪರ ನೀತಿಗಳು, ಭ್ರಷ್ಟಾಚಾರ ರಹಿತ ಆಡಳಿತ, ಸುಧಾರಣೆ ನೀತಿ ನೋಡಿ ನಾನು ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.
ಎರಡು ದಶಕಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದೆ. ಆದರೆ ಅಲ್ಲಿ ನನ್ನ ಕೆಲಸಕ್ಕೆ ಯಾವುದೇ ಗೌರವ ನೀಡಿಲ್ಲ ಹೀಗಾಗಿ ಅಲ್ಲಿಂದ ಹೊರಬಂದಿದ್ದೇನೆ ಎಂದರು. ಕಾಂಗ್ರೆಸ್ ಮಾಧ್ಯಮ ಪ್ಯಾನಲಿಸ್ಟ್, ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಮೊಮ್ಮಗ ಸಿಆರ್ ಕೇಶವನ್ ಕೆಲ ದಿನಗಳ ಹಿಂದಷ್ಟೇ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಕಾಂಗ್ರೆಸ್ ಸಮಿತಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಸ್ಥಾನಕ್ಕೆ ನನ್ನ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ದರು.