Wednesday, May 31, 2023
spot_img
- Advertisement -spot_img

#BREAKING ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ನವದೆಹಲಿ: ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಆರ್ ಎಸ್ ಎಸ್ ನ್ನು “ 21 ನೇ ಶತಮಾನದ ಕೌರವರು” ಅಂತಾ ಕರೆದಿದ್ದ ರಾಹುಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಆರ್ ಎಸ್ ಎಸ್ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್‌ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ಹೇಳಿದ್ದು, ಅವರ ವಿರುದ್ದ ಹರಿದ್ವಾರ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿವೆ ಮತ್ತು ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸೂಚಿಸುತ್ತವೆ ,

ನ್ಯಾಯಾಲಯವು ಏಪ್ರಿಲ್ 12 ರಂದು ದೂರನ್ನು ಕೈಗೆತ್ತಿಕೊಳ್ಳಲಿದೆ , ಮಾರ್ಚ್ 23 ರಂದು, ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾಗಿ ಒಂದು ದಿನದ ನಂತರ ಅವರನ್ನು ಸಂಸತ್ತಿನಿಂದ ಅನರ್ಹ ಮಾಡಲಾಯಿತು.

Related Articles

- Advertisement -

Latest Articles