ಚಿಕ್ಕಮಗಳೂರು: ಶಾಸಕ ಸಿ.ಟಿ ರವಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಬಸವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಎಂದು ತಿಳಿದು ಬಂದಿದೆ. ದಾವಣಗೆರೆ ಮೂಲದ ಹರೀಶ್ ಬಂಧಿತ ಕಾಂಗ್ರೆಸ್ ಕಾರ್ಯಕರ್ತ. ದಾವಣಗೆರೆಯಲ್ಲಿ ಹರೀಶ್ ಬಂಧಿಸಿ ಕರೆತರಾಗಿದೆ. ಹರೀಶ್ ಸೇರಿದಂತೆ ಮೂವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು.
ನಕಲಿ ಪೋಸ್ಟ್ ವೈರಲ್ ಹಿನ್ನೆಲೆ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅವರು ದೂರು ನೀಡಿದ್ದರು. ನಕಲಿ ಪೋಸ್ಟ್ ವೈರಲ್ ಬೆನ್ನಲ್ಲೇ ಸಿ.ಟಿ ರವಿ ವಿರುದ್ಧ ರಾಜ್ಯಾದ್ಯಂತ ಲಿಂಗಾಯತ ಸಮುದಾಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿ ಪೊಲೀಸ್ ಠಾಣೆ ಮುಂದೆ ಕಾರ್ಯಕರ್ತ ಬಹಿರಂಗ ಕ್ಷಮೆ ಕೇಳಿದ್ದಾನೆ.