ಬೆಂಗಳೂರು: ಗುಜರಾತ್ ಮೂಲದ ಅಮುಲ್ ಬೆಂಬಲಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ. ”ಗುಲಾಮರಿಗೆ ಇಟಾಲಿಯನ್ ಆಳ್ವಿಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಆದರೆ ಭಾರತೀಯ ಬ್ರಾಂಡ್ ಅಮುಲ್ ತನ್ನ ಉತ್ಪನ್ನಗಳನ್ನು ಇತರ ಹಲವು ಬ್ರಾಂಡ್‌ಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡುವಾಗ ಅವರಿಗೆ ಸಮಸ್ಯೆ ಇದೆ. ಎಂತಹ ಸೋತವರ ಗುಂಪು ಇದು!” ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇದು ರಾಜಕೀಯ ತಿರುವು ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೆಎಂಎಫ್ ಉಳಿಸಿ ಎಂಬ ಅಭಿಯಾನ ಶುರುವಾಗಿದೆ.
ಅಮುಲ್ ಪ್ರವೇಶದಿಂದಾಗಿ ರಾಜ್ಯದ ಜನಪ್ರಿಯ ಉತ್ಪನ್ನವಾದ ನಂದಿನಿ ಉತ್ಪನ್ನಗಳ ವ್ಯವಹಾರಕ್ಕೆ ಅಡ್ಡಿ ಆಗುತ್ತದೆ ಮತ್ತು ನಂದಿನಿ ಜನಪ್ರಿಯತೆ ಹತ್ತಿಕ್ಕುವ ಕಾರ್ಯ ಆಗಲಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಗುಜರಾತ್ ಮೂಲದ ‘ಅಮುಲ್’ ಕರ್ನಾಟಕದಲ್ಲಿ ವಹಿವಾಟು ಆರಂಭಿಸವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.