ಚಿಕ್ಕಮಗಳೂರು: ಅನಾರೋಗ್ಯ ಕಾರಣದಿಂದ ತಡರಾತ್ರಿ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿ.ಟಿ.ರವಿಯವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಸಿಟಿ ರವಿ, ಈ ಹಿಂದೆ ಪಡೆದ ಚಿಕಿತ್ಸೆ ವೇಳೆ ಸ್ಟಂಟ್ ಮೂಲಕ ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯೆ ನಿವಾರಣೆ ಮಾಡಲಾಗಿತ್ತು. ಆದರೆ, ಕಿಡ್ನಿಗೆ ಹಾಕಿದ್ದ ಸ್ಟಂಟ್ ಸ್ವಲ್ಪ ಜರುಗಿರುವ ಹಿನ್ನೆಲೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಸಿ.ಟಿ.ರವಿ ಲಿಂಗಾಯತ ಸಮಾವೇಶಕ್ಕೂ ಗೈರಾಗಿದ್ದರು. ವಿಡಿಯೋ ಕಾಲ್ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗೆ ಮತ್ತೆ ಆಸ್ಪತ್ರೆ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.