ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ, ಒಂದು ಕಾಲದ ಆಪ್ತ ತಮ್ಮಯ್ಯ ಗೆಲುವಿನ ನಗೆ ಬೀರಿದ್ದಾರೆ. ಕಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎಸ್ ಆನಂದಗೌಡ ಗೆಲುವು ದಾಖಲಿಸಿದ್ರೆ, ಮೂಡಿಗೆರೆಯಲ್ಲಿ ನಯನ ಮೋಟಮ್ಮರಿಗೆ ಗೆಲುವಿನ ಮಾಲೆ ಸಿಕ್ಕಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೋಲು ಕಂಡಿದ್ದಾರೆ.
ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 55678 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಚಿಕ್ಕಮಗಳೂರು ಸೇರಿದಂತೆ ರಾಜ್ಯದಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ. ಮತ್ತೆ ಡಬಲ್ ಇಂಜಿನ್ ಸರ್ಕಾರವೇ ಆಡಳಿತ ನಡೆಸಲಿದೆ ಎಂದಿದ್ದರು.ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ರಾಜ್ಯದ 6.5 ಕೋಟಿ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಸುರ್ಜೆವಾಲಾ ಹೇಳಿದ್ದರು. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದೆ.