ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಹೊಟ್ಟೆ ನೋವಿನಿಂದ ಬಳಲ್ತಿರೋ ಸಿ ಟಿ ರವಿ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ. ರವಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಬಿಜೆಪಿ ಕಚೇರಿಯಿಂದ ಆಶ್ರಯ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅಂತ ತಿಳಿದು ಬಂದಿದೆ. ಈ ವೇಳೆ ಕಿಡ್ನಿಯಲ್ಲಿ ಕಲ್ಲು ಇರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಾಂಗ್ರೆಸ್ಸಿನ ಮಾಜಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಆಶ್ರಯ ಆಸ್ಪತ್ರೆಯಲ್ಲಿ ಸಿ.ಟಿ ರವಿ ದಾಖಲಾಗಿದ್ದು, ಒಂದು ದಿನ ವಿಶ್ರಾಂತಿಯಲ್ಲಿರಲು ಸಿ.ಟಿ ರವಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.