ನವದೆಹಲಿ: ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಕಾವೇರಿ ವಿವಾದ ಭುಗಿಲೆದ್ದಿರುವಾಗಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ.
ತಮಿಳುನಾಡಿಗೆ ಮತ್ತೆ ಪ್ರತಿದಿನವೂ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ ಆದೇಶಿಸಿದೆ.
ಇಂದು ನವದೆಹಲಿಯಲ್ಲಿರುವ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಂಡು ಆದೇಶ ಹೊರಡಿಸಲಾಗಿದೆ.
ಇಂದು ಸಭೆಯಲ್ಲಿ ಮೊದಲಿಗೆ ತಮಿಳುನಾಡು ತಮಗೆ ಕಾವೇರಿ ನೀರು ಬಿಡಲೇಬೇಕು ಎಂದು ಪಟ್ಟುಹಿಡಿಯಿತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಬೇಡಿಕೆ ಇಟ್ಟಿತು. ಆದರೆ ನೀರು ನಿರ್ವಹಣಾ ಪ್ರಾಧಿಕಾರವು ಸಿಡಬ್ಲ್ಯುಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿತು.
ಇದನ್ನೂ ಓದಿ: Cauvery Issue : ಕಾವೇರಿ ಪ್ರಾಧಿಕಾರ ಪಿಸಿಕಲ್ ಟೆಸ್ಟ್ ಮಾಡಿ, ಸತ್ಯಾಂಶ ತಿಳಿಯಬೇಕು: ಸಚಿವ ಪರಮೇಶ್ವರ್
ಕಾವೇರಿ ವಿಚಾರದಲ್ಲಿ ತಮಿಳುನಾಡು ಪರವಾಗಿಯೇ ಆದೇಶ ಬಂದಿದ್ದು, ಕರ್ನಾಟಕಕ್ಕೆ ತೀವ್ರ ಮುಖಭಂಗವಾಗಿದೆ. ಈ ಆದೇಶವು ಕರ್ನಾಟಕದ ರೈತರ ಕೆಂಗಣ್ಣಿಗೂ ಗುರಿಯಾಗಿದ್ದು, ಮತ್ತೆ ಕಾವೇರಿಗಾಗಿ ಹೋರಾಟದ ಕಾವು ಹೆಚ್ಚಾಗುವ ಸಾಧ್ಯತೆ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.