Monday, March 20, 2023
spot_img
- Advertisement -spot_img

ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ : ರಾಷ್ಟ್ರೀಯ ತನಿಖಾ ಏಜೆನ್ಸಿ ಪ್ರಕಟ

ಸುಳ್ಯ : ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿಸಿಕೊಂಡಿರುವವರ ಸುಳಿವು ನೀಡಿದರೆ ನಗದು ಬಹುಮಾನ ನೀಡೋದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ ಪ್ರಕಟಿಸಿದೆ.

ಆರೋಪಿಗಳಾದ ಸುಳ್ಯದ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫಾ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌.ತೌಫಲ್‌ ಕುರಿತು ಸುಳಿವು ಕೊಟ್ಟವರಿಗೆ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌.ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ ಪೈಂಟರ್‌ ಸಿದ್ದಿಕ್‌ ಯಾನೆ ಗುಜರಿ ಸಿದ್ದಿಕ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಕೇರಳದ ಹಲವೆಡೆ ಅಂಟಿಸಲಾಗಿರುವ ನೆೋಟೀಸ್‌ನಲ್ಲಿ ಎನ್ಐಎ ತಿಳಿಸಿದೆ.

ಕಳೆದ ವರ್ಷ ಜುಲೈ 26ರಂದು ಪ್ರವೀಣ್‌ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದರು. ನಾಲ್ವರು ಆರೋಪಿಗಳಿಗೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಈ ಆರೋಪಿಗಳನ್ನು ಕೇರಳದಲ್ಲಿ ಪತ್ತೆ ಹಚ್ಚಲು ಸಹಾಯ ಮಾಡುವವರಿಗೆ ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

Related Articles

- Advertisement -

Latest Articles