ಬೆಂಗಳೂರು : ಈ ಬಾರಿ ಕರಾವಳಿ ಕರ್ನಾಟಕಕ್ಕೆ ವಿಶೇಷವಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಪ್ರಾಣಾಳಿಕ ಸಮಿತಿ ಪ್ರಥಮವಾಗಿ ಭೇಟಿ ಕೊಟ್ಟು ಹಲವು ಗುಂಪುಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ದಿನಗಳ ಬಾಕಿ ಇವೆ. ಹೀಗಾಗಿ ಈಗ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ ಅನಿಸಬಹುದು. ಇತ್ತೀಚಿಗೆ ಉದಯ್ ಪುರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿತ್ತು.
ಅದೇ ರೀತಿ ಈಗ ಕರ್ನಾಟಕದಲ್ಲಿ ಸಂಗ್ರಹಿಸುತ್ತಿದ್ದೇವೆ. ಕಳೆದ ಮೂರು ತಿಂಗಳಿಂದ ಸಂಘಸಂಸ್ಥೆಗಳ ಜೊತೆ ವಿವಿಧ ಸಮೂಹಗಳ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಈ ಭಾಗದ ಸಮಸ್ಯೆಗಳ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದರೆ, ಸಿದ್ದರಾಮಯ್ಯ ಅವರು 10 ಕೆಜಿ ಉಚಿತ ಅಕ್ಕಿಯ ಆಫರ್ ನೀಡಿದ್ದಾರೆ. ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಬಜೆಟ್ ಬಗ್ಗೆ ಘೋಷಣೆ ಮಾಡಲಾಗಿದೆ.