ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಭದ್ರಕೋಟೆ ಕರಾವಳಿಯಲ್ಲೂ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿವೆ. ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯು.ಟಿ.ಖಾದರ್ ಆರಂಭಿಕ ಮುನ್ನಡೆ ಕಾಯ್ದುಕೊಂಡರೆ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಲೀಡ್‌ನಲ್ಲಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 5,106 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 4,935 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 171 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿಯ ಉಮಾನಾಥ್ ಕೋಟ್ಯಾನ್ ಹಿಂದಿಕ್ಕಿ ಕಾಂಗ್ರೆಸ್‌ನ ಮಿಥುನ್ ರೈ ಮುನ್ನಡೆಯಲ್ಲಿದ್ದಾರೆ.
ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ ಮತ್ತೆ ಅಶೋಕ್ ರೈ ಮುನ್ನಡೆಯಲ್ಲಿದ್ದಾರೆ. ಇನ್ನು ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಕ್ಷಿತ್ ಶಿವರಾಂ ಅವರನ್ನು ಹಿಂದಿಕ್ಕಿ ಬಿಜೆಪಿಯ ಹರೀಶ್ ಪೂಂಜಾ ಮುನ್ನಡೆಯಲ್ಲಿದ್ದಾರೆ.