ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ‘ಎಲ್ಲರೂ ಟ್ರೋಲ್ ಮಾಡಿದಾಗ ರಾಹುಲ್ ಗಾಂಧಿ ಮಾತ್ರ ಶಮಿ ಜೊತೆ ನಿಂತಿದ್ದರು’
ಕರ್ನಾಟಕ ವಿಧಾನಸಭೆಯು ದಿನಾಂಕ ನಾಲ್ಕನೇ ಡಿಸೆಂಬರ್ ಬೆಳಿಗ್ಗೆ ಹನ್ನೊಂದು ಘಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. 16 ನೇ ವಿಧಾನಸಭೆಯ ಎರಡನೇ ಅಧಿವೇಶನದ ಕಾರ್ಯ ಕಲಾಪಗಳನ್ನು ಡಿ.4 ರಿಂದ 15ರ ವರೆಗೆ ನಡೆಸಲು ನಿಗದಿಪಡಿಸಲಾಗಿದೆ.
ಈ ಲಘು ಪ್ರಕಟಣೆಗೆ ಲಗತ್ತಿಸಿರುವ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತ ದೃಷ್ಟಿಯ ಪ್ರಶ್ನೆಗಳು, ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಪ್ರಕರಣ: ಎಫ್‌ಐಆರ್ ದಾಖಲು
ಕರ್ನಾಟಕ ವಿಧಾನ ಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಶಾಸಕರು ನೀಡಿರುವ ಪ್ರಶ್ನೆಗಳನ್ನು ಆ ಪ್ರಶ್ನೆಗಳೂ ಒಳಗೊಂಡಂತೆ ದಿನವೊಂದಕ್ಕೆ ಗರಿಷ್ಟ ಐದು ಪ್ರಶ್ನೆ ನೀಡಲು ಅವಕಾಶ ನೀಡಲಾಗಿದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ ಮೂರು ಗಂಟೆಯೊಳಗೆ ಮಾತ್ರ ನೀಡಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.