ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಅಬ್ದುಲ್ ಜಬ್ಬಾರ್ ಹಾಗೂ ಜಮೀರ್ ಅಹ್ಮದ್ ಖಾನ್ ವಿರುದ್ಧ ಸ್ವಪಕ್ಷದ ಮುಸ್ಲಿಂ ಮುಖಂಡರೇ ಈಗ ತಿರುಗಿಬಿದ್ದಿದ್ದಾರೆ.
ಜಬ್ಬಾರ್ ವಿರುದ್ಧದ ಶಿಸ್ತು ಕ್ರಮವನ್ನು ಸ್ವಾಗತಿಸಿರುವ ಮುಖಂಡರು, ಅವರು ಕೇವಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾತ್ರವಲ್ಲದೆ, ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಬೇಕೆಂದು ಅಗ್ರಹ ಮಾಡಿದ್ದಾರೆ. ಅಲ್ಲದೇ ಜಬ್ಬಾರ್ sdpi ಅಭ್ಯರ್ಥಿಗೆ ಫಂಡಿಗ್ ಮಾಡಿರುವುದಕ್ಕೆ ನಮ್ಮ ಬಳಿ ದಾಖಲೆ ಇದೆ ಎಂದು ಅರೋಪಿಸಿದ್ದಾರೆ.
ಇದನ್ನೂ ಓದಿ : ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆಯೂ ನಡೆದಿಲ್ಲ ; ಡಿಕೆಶಿ ಸ್ಪಷ್ಟನೆ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖಂಡ ಉಬೇದುಲ್ಲ ಶರೀಫ್, ಚುನಾವಣೆಯ ಸಮಯದಲ್ಲಿ ಅಬ್ದುಲ್ ಜಬ್ಬಾರ್ ಅವರು ಮನೆ ಬಿಟ್ಟು ಹೊರಗೇ ಬರಲಿಲ್ಲ. ಪಕ್ಷದ ಪರವಾಗಿ ಕೆಲಸ ಮಾಡದ ಅವರ ವಿರುದ್ಧ ಕಾಂಗ್ರೆಸ್ ತೆಗೆದುಕೊಂಡಿರುವ ಶಿಸ್ತು ಕ್ರಮ ಅತ್ಯಂತ ಸರಿಯಾಗಿದೆ. ಅವರನ್ನ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ, ಎಂದು ತಿಳಿಸಿದರು.
ಮತ್ತೊಬ್ಬ ಮುಸ್ಲಿಂ ಮುಖಂಡ ಎ.ಆರ್.ಎಂ. ಹುಸೇನ್ ಮಾತನಾಡಿ, ಅಬ್ದುಲ್ ಜಬ್ಬಾರ್ ಅವರು ಕೇವಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸಾಕಾಗುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಸಿಕ್ಕಿರುವ ಎಂಎಲ್‌ಸಿ ಸ್ಥಾನಕ್ಕೂ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆ ಮೂಲಕ ತಮ್ಮ ತಾಕತ್ತು ತೋರಿಸಬೇಕಾಗಿತ್ತು ಎಂದು ಸವಾಲು ಹಾಕಿದರು. ಅಲ್ಲದೆ, ಜಬ್ಬಾರ್ ಅವರು ಎಸ್‌ಡಿಪಿಐ ಪಕ್ಷಕ್ಕೆ ಹಣಕಾಸಿನ ನೆರವು ನೀಡುತ್ತಿದ್ದರು ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ
ಇಡೀ ದೇಶದಲ್ಲೇ ಹತ್ತು ಮುಸ್ಲಿಂ ಎಂಎಲ್‌ಎಗಳಿರುವ ಏಕೈಕ ರಾಜ್ಯ ಕರ್ನಾಟಕ. ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಸಾಕಷ್ಟು ಪ್ರಾತಿನಿಧ್ಯ ನೀಡಿದೆ. ಹೀಗಿರುವಾಗ, ಒಬ್ಬ ವ್ಯಕ್ತಿಯ ವಿರುದ್ಧದ ಶಿಸ್ತು ಕ್ರಮವನ್ನು ಇಡೀ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಬಿಂಬಿಸುವುದು ತಪ್ಪು, ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿಯೇ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವಿರುದ್ಧ ಕೆಲಸ ಮಾಡುವವರ ಮೇಲೆ ಶಿಸ್ತು ಕ್ರಮ ಅನಿವಾರ್ಯ ಎಂದರು.