ನವದೆಹಲಿ: ಜೆಡಿಎಸ್ ಅಭ್ಯರ್ಥಿ ಡಿಸಿ ಗೌರಿಶಂಕರ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದೆ,
2018ರ ಚುನಾವಣೆಯಲ್ಲಿ ಮತದಾರರಿಗೆ ನಕಲಿ ಬಾಂಡ್ ವಿತರಿಸಿದ ಕೇಸ್‌ಗೆ ಸಂಬಂಧಿಸಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿತ್ತು. ಆದರೆ ಶಾಸಕ ಗೌರಿಶಂಕರ್ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಲು ಮನವಿ ಮಾಡಿದ್ದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿತ್ತು.
ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಆರಿಸಿ ಬಂದಿದ್ದಾರೆ. ಹೀಗಾಗಿ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಸುರೇಶ್‌ಗೌಡ ಮನವಿ ಮಾಡಿದ್ದರು.
ಗೌರಿ ಶಂಕರ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.ಈ ಹಿನ್ನೆಲೆ ಒಂದು ತಿಂಗಳ ಕಾಲ ಹೈ ಕೋರ್ಟ್ ಏಕ ಸದಸ್ಯ ಪೀಠ ಒಂದು ತಿಂಗಳ ಕಾಲ ರಿಲೀಫ್ ನೀಡಿದೆ. ಇದೀಗ ಕೋರ್ಟ್, ಚುನಾವಣೆಗೆ ಸ್ಪರ್ಧೆಗೆ ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.