ಬೆಂಗಳೂರು: ಭಾರತದ ಪ್ರಸಿದ್ಧ ಕಂಪನಿಗಳಲ್ಲಿ ಒಂದಾದ ವಿಪ್ರೋ ಸಂಸ್ಥೆ ಅಧ್ಯಕ್ಷ, ಖ್ಯಾತ ಉದ್ಯಮಿ ಆಜೀಮ್ ಪ್ರೇಮ್‌ಜಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ತೆರಳಿದ ಅಜೀಂ ಪ್ರೇಮ್‌ಜಿ, ಡಿಕೆಶಿ ಅವರನ್ನು ಭೇಟಿ ಮಾಡಿದರು. ಕೆಲಹೊತ್ತು ಮಾತುಕತೆ ನಡೆಸಿದರು.
ಅಜೀಂ ಪ್ರೇಮ್‌ಜಿ ಭೇಟಿ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ವಿಪ್ರೋ ಸಂಸ್ಥೆ ದೇಶಕ್ಕೆ ಆಸ್ತಿ, ಅವರು ಸಾಕಷ್ಟು ಉದ್ಯೋಗ ಸೃಷ್ಟಿಸಿದ್ದಾರೆ. ಇದರಿಂದ ಸರ್ಕಾರದ ಮೇಲಿನ ಹೊರೆ ಕಡಿಮೆಯಾಗುತ್ತಿದೆ. ನಮ್ಮಿಂದಾಗುವ ಎಲ್ಲ ರೀತಿಯ ಸಹಕಾರ ಕೊಡಲಾಗುತ್ತಿದೆ. ನಾನೂ ಸಹ ಅವರಿಗೆ ಸಂಪೂರ್ಣ ಸಹಕಾರ ಕೊಡತ್ತಿದ್ದೇನೆ. ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಕ್ಕೆ ಅವರಿಗೆ ಆಸೆ ಇದೆ. ನಾವೆಲ್ಲಾ ಸೇರಿ ಒಟ್ಟಿಗೆ ಕೆಲಸ ಮಾಡಲಿದ್ದೇವೆ’ ಎಂದು ಹೇಳಿದರು.


ಇದನ್ನೂ ಓದಿ; G20 Summit 2023 : ಜಿ20 ಶೃಗಸಭೆಯ ಔತಣಕೂಟದಲ್ಲಿ ಭಾಗಿಯಾಗುತ್ತಿಲ್ಲ ಹೆಚ್ಡಿಡಿ!
ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಮಾತನಾಡಿ, ‘ನಾವು ಮಳೆ ಎದುರು ನೋಡುತ್ತಿದ್ದೇವೆ, ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಸ್ವಲ್ಪ ಗಲಾಟೆ ನಡೆಯುತ್ತಿದೆ. ಡ್ಯಾಂಗೆ ಒಳ ಹರಿವು ಇಲ್ಲ. ಆದರೂ ನೀರು ಬಿಡುವಂತೆ ಕೋರ್ಟ್ ಆದೇಶ ಕೊಟ್ಟಿದೆ. ಏನೇ ಆಗಲೀ ರೈತರ ರಕ್ಷಣೆ, ಕುಡಿಯಲು ನೀರು ಬೇಕು’ ಎಂದರು.
‘ತಮಿಳುನಾಡಿನವರು ಬೆಳೆಗೆ ನೀರು ಕೇಳುತ್ತಿದ್ದಾರೆ; ಅವರು ಬೆಳೆ ಬೆಳೆಯಲು ಪ್ಲಾನ್ ಮಾಡಿಕೊಳ್ಳಬೇಕು, ಅದು ಅವರ ತಪ್ಪು. ಡ್ಯಾಂನಲ್ಲಿ ನೀರೆ ಇಲ್ಲ. ಒಳ ಹರಿವು ಇಲ್ಲ. ನಾವು ಕುಡಿಯುವ ನೀರಿಗೆ ಆದ್ಯತೆ ಕೊಡುತ್ತಿದ್ದೇವೆ. ಆ ನಿಟ್ಟಿನಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ’ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.