ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಧಾನ ಸ್ಫೋಟಗೊಂಡಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದಾರೆ. ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕಾರ ಸಹ ಮಾಡಿದ್ದಾರೆ. ಅಲ್ಲದೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್ನಲ್ಲಿ ಭಾರೀ ಸಂಚನಲನ ಮೂಡಿಸಿದೆ.
ಇನ್ನು ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ರಾಜೀನಾಮೆ ಪರ್ವ ಶುರುವಾಗಿದೆ. ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಇನ್ನೂ ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಡಿ.ಕೆ.ಶಿವಕುಮಾರ್ ಇಡೀ ಅಲ್ಪಸಂಖ್ಯಾತರ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ ಎನ್ನಲಾಗ್ತಿದೆ.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗದವರ ತಲೆತಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ತಲೆದಂಡಕ್ಕೂ ಹೈಕಮಾಂಡ್ ಮುಂದಾಗಿದೆ. ಈ ಸಾಲಿನಲ್ಲಿ ಜಮೀರ್ ಅಹಮ್ಮದ್ ಖಾನ್ ಇದ್ದು, ಅವರ ಸಚಿವ ಸ್ಥಾನಕ್ಕೂ ಕುತ್ತು ಬಂದಿದೆ. ಈ ಎಲ್ಲಾ ಬೆಳವಣಿಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದು ಅಚ್ಚರಿಗೆ ಕಾರಣವಾಗಿದೆ.