ನವದೆಹಲಿ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ನಡುವೆಯೇ ಹೈಕಮಾಂಡ್ ನಾಯಕರನ್ನ ಭೇಟಿಯಾಗಲು ದೆಹಲಿಗೆ ತೆರಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಭೇಟಿಗೆ ಅವಕಾಶ ಸಿಗದೆ, ಬರಿಗೈನಲ್ಲಿ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ನವೆಂಬರ್‌ನ ರಾಜಕೀಯ ಬೆಳವಣಿಗೆಗಳ ಮಧ್ಯೆ, ಭಾನುವಾರ ಸಂಜೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದರು.
ದೆಹಲಿಗೆ ತೆರಲಿದ್ದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಇತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಮಯ ಕೇಳಿದ್ದರು. ರಾಹುಲ್ ಗಾಂಧಿ ಇಂದು ಬೆಳಗ್ಗೆ 10 ರಿಂದ 11ರ ಒಳಗೆ ಡಿಕೆಶಿಯನ್ನು ಭೇಟಿಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್ ನಾಯಕರಿಂದ ಭೇಟಿಗೆ ಅವಕಾಶ ದೊರೆಯಲಿಲ್ಲ. ಇದರಿಂದ, ಭೇಟಿಯ ನಿರೀಕ್ಷೆಯಿಲ್ಲದೆ ಡಿ.ಕೆ.ಶಿವಕುಮಾರ್ ಇಂದು ಮಧ್ಯಾಹ್ನ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಹೈಕಮಾಂಡ್ ಒಪ್ಪಿದ್ರೆ ನಾನೇ ಪೂರ್ಣಾವಧಿಯ ಸಿಎಂ; ರಾಗ ಬದಲಿಸಿದ್ದೇಕೆ ಸಿದ್ದು
ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, ನಾನು ನಿಯಮಿತವಾಗಿ ದೆಹಲಿಗೆ ಕೆಲಸ ಇದ್ದಾಗ ಹೋಗುತ್ತಿರುತ್ತೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು, ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡಲು ಮತ್ತು ನ್ಯಾಯಾಲಯದ ವಿಚಾರಣೆಗಳಿಗೂ ತೆರಳುತ್ತೇನೆ, ಎಂದು ಹೇಳಿದ್ದರು. ಹೈಕಮಾಂಡ್ ಭೇಟಿಗೆ ಸಮಯ ಸಿಗದಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.