ಮೈಸೂರು: ಆಗಸ್ಟ್ 30ರಂದು ನಗರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಟು 11 ಗಂಟೆ ಸುಮಾರಿಗೆ ಮೈಸೂರು ತಲುಪಲಿದ್ದಾರೆ. ಬಳಿಕ ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯತ್ ಸಂಭಾಗಣದಲ್ಲಿ ಸಭೆ ನಿಗಧಿಯಾಗಿದ್ದು, ಸಭೆಯಲ್ಲಿ ಸಚಿವರು, ಶಾಸಕರು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ: ಇಂದು ಇಸ್ರೋ ಕಚೇರಿಗೆ ಸಿಎಂ ಭೇಟಿ
‘ರಾಜ್ಯದ ಸುಮಾರು 1,09,54,000 ಮಹಿಳೆಯರ ಖಾತೆಗೆ ತಲಾ 2,000 ರೂ. ಜಮಾ ಮಾಡಲಾಗುತ್ತದೆ. ಈ ಯೋಜನೆಯಡಿ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಸುಮಾರು 13,81,430ಕ್ಕೂ ಹೆಚ್ಚು ಮಹಿಳೆಯರು ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರು. ಜೊತೆಗೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದು, ಅವರೇ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರಗೊಂಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.