ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಇರುವ ಕಾವೇರಿ ನದಿ ನೀರಿನ ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವಿಚಾರವನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದಿದ್ದೇವೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ, ತಮಿಳುನಾಡಿಗೆ ನೀರು ಹರಿಸುವ ಸಮಸ್ಯೆಗೆ ಸೂಕ್ತ ಪರಿಹಾರ ಸಿಗಲಿದೆ. ಮೊದಲೇ ಹೇಳಿದಂತೆ ಮೇಕೆದಾಟು ಜಲಾಶಯ ನಿರ್ಮಾಣವ ಆಗಿದ್ದರೆ, ಇಂದು ಈ ಸಮಸ್ಯೆಯೇ ಇರುತ್ತಿರಲಿಲ್ಲ ಎಂದರು.
ಮೇಕೆದಾಟು ಡ್ಯಾಂ ನಿರ್ಮಾಣವಾದರೆ, ಅಲ್ಲಿ ಸಂಗ್ರಹಿಸುವ ನೀರನ್ನು ನಾವು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬಹುದು. ಜೊತೆಗೆ ಅಗತ್ಯ ಸಂದರ್ಭಗಳಲ್ಲಿ ಮಾತ್ರ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತದೆ ಎಂದರು.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಚಿಂತನೆ: ಡಿ.ಕೆ.ಶಿವಕುಮಾರ್
ತನ್ನ ಪಾಲಿನ ನೀರನ್ನು ತಮಿಳುನಾಡು ಯಾವ ಉದ್ದೇಶಕ್ಕಾದರೂ ಬಳಸಿಕೊಳ್ಳಬಹುದು. ತಮಿಳುನಾಡಿಗೆ ಹರಿಯುವ ನೀರನ್ನು ತಡೆಯಲು ನಮಗೆ ಅಧಿಕಾರವಿಲ್ಲ. ಸದ್ಯ ತಮಿಳುನಾಡಿಗೆ ನೀರು ಬಿಡುತ್ತಿರುವುದಕ್ಕೆ ರಾಜ್ಯದಲ್ಲಿ ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಕೋರ್ಟ್‌ನ ಆದೇಶ ಪಾಲಿಸುವುದು ಅನಿವಾರ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.