ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಶಾಸಕರ ಜೊತೆ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು.
ಡಿಕೆ ಶಿವಕುಮಾರ್ ಬಿಜೆಪಿ ನಾಯಕರಾದ ಬೊಮ್ಮಾಯಿ, ಅಶೋಕ್, ಯತ್ನಾಳ್ ಜೊತೆ ಕುಶಲೋಪರಿ ನಡೆಸಿದರು. ಅಷ್ಟೇ ಅಲ್ಲದೇ ತಮ್ಮ ವಿರುದ್ಧ ಕನಪುರದಲ್ಲಿ ಸ್ಪರ್ಧಿಸಿ ಸೋತಿರುವ ಆರ್ ಅಶೋಕ್ ಒಟ್ಟಿಗೆ ಫೋಟೋ ತೆಗೆಸಿಕೊಂಡರು. ಅಂದಹಾಗೆ ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಆರ್.ವಿ ದೇಶಪಾಂಡೆ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ.
ಐದು ಗ್ಯಾರಂಟಿಗಳ ಅನುಷ್ಠಾನ ಸೇರಿ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು. ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.