Tuesday, November 28, 2023
spot_img
- Advertisement -spot_img

ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು: ‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕೆಂಬುದು ಸೂಕ್ತವಲ್ಲ, ಎಲ್ಲರ ನಾಯಕತ್ವದಿಂದ ಕಾಂಗ್ರೆಸ್​​ ಅಧಿಕಾರಕ್ಕೆ ಬಂದಿದೆ ಎಂದರು. ಮುಖ್ಯಮಂತ್ರಿ ಆಗಲು ಸಿದ್ಧನಿದ್ದೇನೆ. ನಾನೂ 50 ಶಾಸಕರನ್ನು ಕರೆದೊಯ್ಯಬಹುದು. ಆದರೆ, ಎಂದಿಗೂ ಲಾಬಿ ಮಾಡುವುದಿಲ್ಲ ಎಂದು ಪರಮೇಶ್ವರ ಹೇಳಿದ್ದರು. ಈ ಮೂಲಕ, ತಮ್ಮನ್ನು ಮುಖ್ಯಮಂತ್ರಿ ಮಾಡಿದರೆ ಸರ್ಕಾರ ಮುನ್ನಡೆಸಲು ಸಿದ್ಧ ಎಂದಿದ್ದರು.

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ.13 ರಂದು ಬಂದಿದ್ದು, ಅದರಂತೆ ಸಿದ್ದರಾಮಯ್ಯ 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಎಂದು ಘೋಷಿಸಲಾಗಿದೆ. ಹೈಕಮಾಂಡ್ ತೀರ್ಮಾನ ಕೈಗೊಂಡು ಸರ್ಕಾರ ಮುನ್ನಡೆಸಲು ಹೇಳಿದರೆ, ನಾನು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ. ನಾನು ಅವಕಾಶವನ್ನು ನಿರಾಕರಿಸುತ್ತೇನೆ ಎಂದಲ್ಲ, ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಎಂಬುದು ಹೈಕಮಾಂಡ್‌ಗೆ ತಿಳಿದಿದೆ. ನಾನೂ ಸಹ ಪಕ್ಷಕ್ಕೆ ಸಹಾಯ ಮಾಡಿದ್ದೇನೆ.

Related Articles

- Advertisement -spot_img

Latest Articles