ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್ ಅಳವಡಿಸಲು ನಿಗದಿ ಮಾಡಿದ್ದ ಗಡುವನ್ನು ಸರ್ಕಾರ 2024 ಫೆಬ್ರವರಿ 17ರ ವರೆಗೆ ವಿಸ್ತರಿಸಿದೆ.
2019 ಏ.1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದಕ್ಕೆ ಈ ಮೊದಲು ನವೆಂಬರ್ 17ರ ಗಡುವನ್ನು ಸಾರಿಗೆ ಇಲಾಖೆ ನೀಡಿತ್ತು. ಆದರೆ ಈ ದಿನಾಂಕ ವಿಸ್ತರಿಸಲಾಗಿದೆ.
ಇದನ್ನೂ ಓದಿ: Telangana Election 2023: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್!
ಇದುವರೆಗೆ ಕರ್ನಾಟಕದಲ್ಲಿ 2.30 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆಯಾಗಿದೆ. ರಾಜ್ಯದಲ್ಲಿ 1950ರಿಂದಲೂ ಆಗಿರುವ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಸಂಖ್ಯೆಯನ್ನು ಪರಿಗಣಿಸಿದರೆ ಅಂದಾಜು 1.70 ಕೋಟಿ ವಾಹನಗಳಿವೆ. ಇದಕ್ಕೆ ಹೋಲಿಸಿದರೆ ಎಚ್‌ಎಸ್‌ಆರ್‌ಪಿ ಅಳವಡಿಸುವ ವಿಚಾರದಲ್ಲಿ ವಾಹನ ಮಾಲೀಕರಲ್ಲಿ ಜಾಗೃತಿ ಇಲ್ಲದೇ ಇರುವುದು ಗೋಚರಿಸಿದೆ. ಆದ್ದರಿಂದ 3 ತಿಂಗಳ ಮಟ್ಟಿಗೆ ಅವಧಿ ವಿಸ್ತರಣೆ ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಡೀಪ್‌ಫೇಕ್ ವಿಡಿಯೋಗಳು ದೊಡ್ಡ ಆತಂಕಕಾರಿ ಬೆಳವಣಿಗೆ: ಪ್ರಧಾನಿ ಮೋದಿ
ಹೆಚ್‌ಎಸ್‌ಆರ್‌ಪಿ ಎಂದರೇನು?
ಹೆಚ್‌ಎಸ್‌ಆರ್‌ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಿದ ನಂಬರ್ ಪ್ಲೇಟ್. ಬಳಕೆಯಿಲ್ಲದ ಎರಡು ಲಾಕ್‌ಗಳನ್ನು ಹೊಂದಿದೆ. ಮುಂಭಾಗದ ಮತ್ತು ಹಿಂಭಾಗದ ನಂಬರ್ ಪ್ಲೇಟ್‌ನ ಎಡಬದಿಯ ಮೇಲ್ತುದಿಯಲ್ಲಿ ಕ್ರೋಮಿಯಂ ಹಾಲೋಗ್ರಾಂ ಇದ್ದು, ಅದರಲ್ಲಿ ಆಶೋಕಚಕ್ರದ ಚಿತ್ರವಿದೆ. ಇದು 20 ಎಂಎಂX 20 ಎಂಎಂ ಗಾತ್ರದಲ್ಲಿ ಹಾಟ್ ಸ್ಟಾಂಪಿಂಗ್ ಮೂಲಕ ಲಗತ್ತಿಸಲಾಗುತ್ತದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.