ಚಿಕ್ಕೋಡಿ : ಕಾಂಗ್ರೇಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಯಲ್ಲಿ ಮಗ್ನವಾಗಿದೆ, ಇದರಿಂದಾಗಿ ಬರಗಾಲ ಘೋಷಣೆಗೆ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ತೋರಣಹಳ್ಳಿ ಗ್ರಾಮದಲ್ಲಿ ಸುದ್ಧಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷ ಮಳೆ ಇಲ್ಲದೆ ಬರಗಾಲ ತಾಂಡವಾಡುತ್ತಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ಕಮರಿ ಹೋಗುತ್ತಿದೆ ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ. ಆದರೂ ಕೂಡಾ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಸುಳ್ಳು ಭರವಸೆಯನ್ನು ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Prajwal Revanna Disqualification: ಬ್ರಹ್ಮ ಬಂದ್ರು ಹೋರಾಟ ನಿಲ್ಸಲ್ಲ : ವಕೀಲ ದೇವರಾಜೆಗೌಡ
ಮುಂದು ವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡದೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಮೋಸ ಮಾಡುತ್ತಿದೆ. 10 ಕೆ.ಜಿ ಅಕ್ಕಿಯನ್ನು ಕೊಡುತ್ತೇನೆ ಅಂದ್ರು ಈಗ 5 ಕೆ.ಜಿ ಕೊಡುತ್ತಿದ್ದಾರೆ. ಗೃಹ ಯೋಜನೆಯಡಿಯಲ್ಲಿ ತಿಂಗಳಿಗೆ ಮಹಿಳೆಯರಿಗೆ 2 ಸಾವಿರ ಕೊಡುತ್ತೇವೆ ಎಂದು ಘೋಷಣೆ ಮಾಡಿ ಇದೀಗ ಆ ಹಣವು ಸರಿಯಾಗಿ ಮುಟ್ಟುತ್ತಿಲ್ಲ. ಈ ಮೂಲಕ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡುತ್ತಿದೆ. ಬಿಜೆಪಿ ಪಕ್ಷವು ಸರ್ಕಾರದ ಮೇಲೆ ಒತ್ತಡ ಹಾಕಿ ಬರಗಾಲ ಘೋಷಣೆಗೆ ಒತ್ತಾಯಿಸುತ್ತೇವೆ ಎಂದರು.
ಇದನ್ನೂ ಓದಿ : Special parliament Session : ವಿಶೇಷ ಅಧಿವೇಶನದಲ್ಲಿ ಈ ಎರಡು ಮಸೂದೆ ಮಂಡನೆ ಸಾಧ್ಯತೆ