ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ವಿರುದ್ಧ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕಾನೂನು ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿರುವ ಆರೋಪದ ಅವರ ಮೇಲಿದ್ದು, ಈ ಹಿನ್ನೆಲೆ ಸಮನ್ಸ್ ಜಾರಿಯಾಗಿದೆ.
ಬಿಜೆಪಿ ನಾಯಕ ಹರೀಶ್ ಖುರಾನಾ ದೆಹಲಿ ಹೈಕೋರ್ಟ್‌ನಲ್ಲಿ ಈ ಸಂಬಂಧ ದೂರು ನೀಡಿದ್ದರು ಈ ದೂರಿನ ಮೇರೆಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು, ಸುನಿತಾ ಅವರಿಗೆ ಸಮನ್ಸ್ ಜಾರಿ ಮಾಡಿ, ನವೆಂಬರ್ 18 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ. ಮುಖ್ಯಮಂತ್ರಿಗಳ ಪತ್ನಿ ಎರಡು ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಜನತಾ ಪ್ರಾತಿನಿಧ್ಯ ಕಾಯ್ದೆಯ(ಆರ್‌ಪಿ) ನಿಯಮಗಳ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಫ್ಲ್ಯಾಟ್ ಹೆಸರಲ್ಲಿ ವಂಚನೆ ಕೇಸ್; ಸಂಸದೆ ನುಸ್ರತ್‌ಗೆ ಸಮನ್ಸ್
ದೂರುದಾರರು ಮತ್ತು ಇತರ ಸಾಕ್ಷ್ಯವನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಸುನಿತಾ ಕೇಜ್ರಿವಾಲ್ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆ ಅಡಿ ಪ್ರಕರಣದ ವಿಚಾರಣೆಗೆ ಅಂಗೀಕರಿಸಿದ್ದು, ಆರೋಪಿಗೆ ಸಮನ್ಸ್ ನೀಡಲಾಗಿದೆ.
ಸುನಿತಾ ಅವರು ಉತ್ತರ ಪ್ರದೇಶದ ಸಾಹೀಬಾಬಾದ್ ವಿಧಾನಸಭಾ ಕ್ಷೇತ್ರ ಮತ್ತು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನಿತಾ ಕೇಜ್ರಿವಾಲ್ ವಿರುದ್ಧದ ಈ ಆರೋಪ ಸಾಬೀತಾದರೆ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸುವ ಹಕ್ಕು ಕೋರ್ಟ್‌ಗಿದೆ.
ಇದನ್ನೂ ಓದಿ: 370ನೇ ವಿಧಿ ರದ್ದು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂ
‘ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಇಬ್ಬರೂ ಐಆರ್‌ಎಸ್ ಅಧಿಕಾರಿಗಳಾಗಿದ್ದಾರೆ. ದೇಶದಲ್ಲಿ ಒಂದು ರಾಷ್ಟ್ರ ಮತ್ತು ಒಂದು ಮತದಾರರ ಗುರುತಿನ ಚೀಟಿ ಜಾರಿಯಲ್ಲಿದೆ ಎಂದು ಅವರಿಗೆ ತಿಳಿದಿರುವ ಕಾರಣ ಅವರು ಇಂತಹ ಅಪರಾಧವನ್ನು ಎಸಗುವುದು ಅಕ್ಷಮ್ಯ’ ಎಂದು ದೂರುದಾರ ಖುರಾನಾ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.