ಬೆಂಗಳೂರು: ರಾಷ್ಟ್ರ ರಾಜಾಧಾನಿ ದೆಹಲಿಯಲ್ಲಿ ಬುಧವಾರ ಬಿಜೆಪಿ ಹೈಕಮಾಂಡ್ ವರಿಷ್ಠರ ಮಹತ್ವದ ಸಭೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು.
ದೆಹಲಿಯಲ್ಲಿ ನಡೆದ ಬಿಜೆಪಿ ವರಿಷ್ಠರ ಸಭೆಯಲ್ಲಿ ಕರ್ನಾಟಕದ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತುಕತೆ ನಡೆದಿಲ್ಲ ಎನ್ನಲಾಗಿದೆ. ಇದೇ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಕುರಿತು ಮಾತ್ರ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಆದರೆ, ಕರ್ನಾಟಕದ ಜಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ರಾಷ್ಟ್ರೀಯ ನಾಯಕರು ತುಟಿ ಬಿಚ್ಚಿಲ್ಲ ಎನ್ನಲಾಗಿದೆ.
ಇದನ್ನೂ ಓದಿ; ಚೈತ್ರಾ ಕುಂದಾಪುರ ವಂಚನೆ ಕೇಸ್ : ಹಾಲಮಠದಲ್ಲೇ ನಡೆದಿತ್ತಾ 7 ಕೋಟಿ ಡೀಲ್?
ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ಕೆಲ ಹಾಲಿ ಹಾಗೂ ಮಾಜಿ ಶಾಸಕರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದಳಪತಿಗಳ ಜೊತೆಗೆ ಬಿಜೆಪಿ ಮೈತ್ರಿಯಾದರೆ ಕೆಲ ಶಾಸಕರು ಪಕ್ಷದಿಂದ ದೂರ ಉಳಿಯುವ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಲ್ಲೂ ಕೂಡ ಕೆಲ ಶಾಸಕರು ಬಿಜೆಪಿ ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಲೇ ಮೈತ್ರಿ ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಆದರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರ ಆಂತರಿಕ ಅಸಮಾಧಾನ ಬಿಜೆಪಿಗೆ ತಲೆನೋವಾಗಿದೆ. ಕರ್ನಾಟಕದ ಮೈತ್ರಿ ವಿಚಾರ ಬಿಜೆಪಿಗೆ ಹೈಕಮಾಂಡ್‌ಗೆ ಕಗ್ಗಂಟಾಗಿದೆ.
ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂಬ ಬಿ.ಎಸ್. ಯಡಿಯೂರಪ್ಪ ಹೇಳಿದ ಬಳಿಕ ಪಕ್ಷದಲ್ಲಿ ಗೊಂದಲ ನಿರ್ಮಾಣವಾಗಿದೆ. ತಮ್ಮ ಹೇಳಿಕೆ ಬಳಿಕ ಬಿಎಸ್‌ವೈ ಕೂಡಾ ಸೈಲೆಂಟ್ ಆಗಿದ್ದಾರೆ. ಹೈಕಮಾಂಡ್ ವರಿಷ್ಠರ ಜತೆಗೆ ಮಾತುಕತೆ ನಡೆಸಿ ಮುಂದುವರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.