ದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ದೆಹಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ 2020 ರಿಂದ 2021ರ ನಡುವೆ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹೆಂಡತಿಯ ಸಹಾಯದಿಂದಲೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ನದಿನೀರು ಹಂಚಿಕೆ ವಿವಾದ; ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ
ಈ ಕೃತ್ಯದಲ್ಲಿ ಆರೋಪಿಯ ಪತ್ನಿಯೂ ಆತನಿಗೆ ನೆರವು ನೀಡಿದ್ದರಿಂದ ಮತ್ತು ಪೊಲೀಸರಿಗೆ ವಿಷಯ ತಿಳಿಸದ ಕಾರಣ ಆಕೆಯ ವಿರುದ್ಧ ಸೆಕ್ಷನ್ 120-ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸಂತ್ರಸ್ತೆ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, 2020ರಲ್ಲಿ ಆಕೆಯ ತಂದೆ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಆಕೆ ಖಿನ್ನತೆಗೆ ಒಳಗಾಗಿದ್ದಳು, ಬಳಿಕ ತಂದೆಯ ಸ್ನೇಹಿತ ಎಂದು ಪರಿಚಯವಾಗಿದ್ದ ಆರೋಪಿ ಆಕೆ ಜೊತೆ ಸ್ನೇಹ ಬೆಳೆಸಿದ್ದ, ಬಳಿಕ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಸಂದೀಪ್ ಜಾಖರ್ ಅಮಾನತು!
ಆಘಾತಕಾರಿ ವಿಚಾರವೆಂದರೆ ಆಕೆ ಗರ್ಭ ಧರಿಸಿದಾಗ ಆರೋಪಿಯ ಪತಿ ಗರ್ಭಪಾತದ ಮಾತ್ರೆ ನೀಡಿದ್ದಾಳೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಮತ್ತು ಆತನ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 376(2)(ಎಫ್), 506, 509, 323, 313, 120ಬಿ, ಮತ್ತು 34 ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 6/21 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜೊತೆಗೆ ಆರೋಪಿಯನ್ನು ಅಮಾನತುಗೊಳಿಸಿ ಅರವಿಂದ್ ಕೇಜ್ರಿವಾಲ್
ಅತ್ಯಾಚಾರಿಗಳಿಗೆ ಹೊಸ ಕಾನೂನು!
ಕೆಲ ದಿನಗಳ ಹಿಂದೆಯಷ್ಟೇ ಅಂತ್ಯಗೊಂಡ ಮುಂಗಾರು ಅಧಿವೇಶನದಲ್ಲಿ ಅಪರಾಧಗಳ ಕಾಯ್ದೆಗಳಿಗೆ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ. 1860ರ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಪುರಾವೆ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ. ಪ್ರಸ್ತಾವಿತ ನೂತನ ಮಸೂದೆಗಳು ಅತ್ಯಾಚಾರದ ಶಿಕ್ಷೆಯಲ್ಲಿನ ಬದಲಾವಣೆಗೆ ಮುಂದಾಗಿವೆ. ಅಪ್ರಾಪ್ತ ವಯಸ್ಸಿನವರ ಮೇಲೆ ಅತ್ಯಾಚಾರ ಎಸಗಿದ್ರೆ ಗಲ್ಲುಶಿಕ್ಷೆ ವಿಧಿಸುವ ನಿಯಮ ಜಾರಿಯಾಗಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷ ಜೈಲು ಶಿಕ್ಷೆಯಿಂದ ಜೀವಾವಧಿಯವರೆಗೂ ಶಿಕ್ಷೆ ವಿಧಿಸಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು, ಕೊಲೆ ಹಾಗೂ ಸರ್ಕಾರದ ವಿರುದ್ಧದ ಅಪರಾಧಗಳಿಗೆ ಕಾನೂನುಗಳನ್ನು ರೂಪಿಸಲು ಈ ಮಸೂದೆಗಳು ಆದ್ಯತೆ ನೀಡುತ್ತೆದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.