ಬೆಂಗಳೂರು: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜಯಗಳಿಸುವ ಮೂಲಕ ಎಂಟನೇ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಅದರಲ್ಲೂ, ತಮ್ಮ ಏಳು ಓವರ್‌ಗಳ ಬೌಲಿಂಗ್‌ನಲ್ಲಿ 21 ರನ್ ನೀಡಿ ಆರು ರನ್‌ಗಳನ್ನು ಪಡೆದ ಮಹಮದ್ ಸಿರಾಜ್ ಅವರನ್ನು ದೇಶದ ಜನ ಕೊಂಡಾಡುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡಾ ಟೀಂ ಇಂಡಿಯಾವನ್ನು ಅಭಿನಂಧಿಸಿದ್ದು, ‘ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು’ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ‘ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು… ಏಷ್ಯಾಕಪ್ ಫೈನಲ್ಸ್ ನಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಶುಭಾಶಯಗಳು. 6 ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ. ಜೈಹೋ ಟೀಂ ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ; ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸುವುದೆ ನಮ್ಮ ಅಜೆಂಡಾ : ಡಿಕೆಶಿ
ಪ್ರಧಾನಿ ಮೋದಿ ಸಂತಸ:
ಭಾರತ ಪುರುಷರ ಕ್ರಿಕೆಟ್ ತಂಡ ಏಷಿಯಾ ಕಪ್ ಗೆದ್ದಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಟೀಂ ಇಂಡಿಯಾ ಚೆನ್ನಾಗಿ ಆಡಿದೆ! ಏಷ್ಯಾ ಕಪ್ ಗೆದ್ದಿದ್ದಕ್ಕೆ ಅಭಿನಂದನೆಗಳು. ಟೂರ್ನಿಯ ಮೂಲಕ ನಮ್ಮ ಆಟಗಾರರು ಗಮನಾರ್ಹ ಕೌಶಲ್ಯವನ್ನು ತೋರಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.