Friday, September 29, 2023
spot_img
- Advertisement -spot_img

ವಿ. ಸುನೀಲ್ ಕುಮಾರ್ ಸಂಪೂರ್ಣ ಮಾಹಿತಿ

ಬಾಲ್ಯಶಿಕ್ಷಣ
ಆಸಗ್ಟ್‌ 15, 1975ರಂದು ಸುನೀಲ್ ಕುಮಾರ್ ಮೂಡಿಗೆರೆಯಲ್ಲಿ ಜನಿಸಿದ್ರು. ನಾಲ್ಕನೇ ತರಗತಿಯವರೆಗೆ ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ ರಾಮಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ್ರು. 5-7 ತರಗತಿ ಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದರು.
ಬಳಿಕ ಶಿವಮೊಗ್ಗ ಜಿಲ್ಲೆಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಮುಗಿಸಿ ಚಿಕ್ಕಮಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾ ಪದವಿ ಪಡೆದು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕರಾವಳಿ ಕರ್ನಾಟಕ ಭಾಗದ ಪ್ರಮುಖ ಬಿಜೆಪಿ ನಾಯಕ, ಉತ್ತಮ ವಾಗ್ಮಿಯೂ ಆಗಿರುವ ಸುನೀಲ್ ಕುಮಾರ್ ಬಿಜೆಪಿಯ ಕಟ್ಟಾಳು ಅಂತಲೇ ಹೆಸರಾಗಿದ್ದಾರೆ. ರಾಷ್ಟ್ರೀಯವಾದಿ ಚಿಂತನೆಯ ಒಲವು ಹೊಂದಿದ್ದ ಅವರು ಸುನೀಲ್ ಕುಮಾರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲೂ ಸಕ್ರಿಯರಾಗಿ ಭಾಗಿಯಾಗಿದ್ದರು. ಬಜರಂಗದಳದ ಮೂಲಕ ಹಿಂದೂಪರ ಹೋರಾಟದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ರಾಜಕೀಯ ಜೀವನ

2004ರಲ್ಲಿ ಕಾರ್ಕಳ ಅಸೆಂಬ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2012ರಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸುನೀಲ್, ಕಾಂಗ್ರೆಸ್‌ನ ಕೆ.ಜಯಪ್ರಕಾಶ್ ಹೆಗಡೆ ವಿರುದ್ದ ಸುಮಾರು 45,000 ಮತಗಳ ಅಂತರದಿಂದ ಸೋಲು ಕಂಡಿದ್ದರು.

ಸಾವರ್ಕರ್ ಅವರ ಜನ್ಮ ಶತಮಾನೋತ್ಸವ ಆಚರಣೆಯನ್ನು ಕಾರ್ಕಳ ತಾಲೂಕಿನಾದ್ಯಂತ ಯುವಜನರಿಗೆ, ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಸರಣಿಗಳನ್ನು ನಡೆಸಿದ್ದರಿಂದ ಬಿಜೆಪಿಯ ಹೈಕಮಾಂಡ್ ಇವರನ್ನು ಗುರುತಿಸಿತು.

ಕಾರ್ಕಳದಲ್ಲಿ ಪಾಲಿಟೆಕ್ನಿಕ್ ಕಾಲೇಜು, ಮಿಯ್ಯಾರಿನ ಮೋರಾರ್ಜಿ ದೇಸಾಯಿ ವಸತಿ ಶಾಲೆ, ಕಾರ್ಕಳ ತಾಲೂಕಿನ ಬಹುತೇಕ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳನ್ನು ಪುನಶ್ಚೇತನಗೊಳಿಸಿದರು. 1 ಕೋಟಿ ರೂಪಾಯಿ ವೆಚ್ಚದಲ್ಲಿ ತುಳುನಾಡಿನ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ “ಕೋಟಿ ಚೆನ್ನಯ ಥೀಂ ಪಾರ್ಕ್” ಸ್ಥಾಪಿಸಿದ್ರು.

60 ಲಕ್ಷ ವೆಚ್ಚದಲ್ಲಿ ಕಾರ್ಕಳ ಹಿರಿಯಂಗಡಿ ಬಳಿ ನಿರ್ಮಿಸಿದ ಯಾತ್ರಿ ನಿವಾಸ, 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಪರಶುರಾಮ ಥೀಂ ಪಾರ್ಕ್ ಲೋಕಾಪರ್ಣ. 2008ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ ವಿರುದ್ದ 1,537 ಮತಗಳ ಅಂತರದಿಂದ ಸೋಲು ಕಂಡಿದ್ದರು.

2013, 2018ರ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವನ್ನು ಸಾಧಿಸಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆದ ಸಂಪುಟ ವಿಸ್ತರಣೆಯ ವೇಳೆ ಸುನೀಲ್ ಕುಮಾರ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles